Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮಾರ್ಕನು 16:15

ಬೈಬಲ್ ವಚನ · IRV

ಮಾರ್ಕನು 16:15

ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.

ಇಡೀ ಅಧ್ಯಾಯ ಓದಿ: ಮಾರ್ಕನು 16

ಸಂದರ್ಭದಲ್ಲಿ

12ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.

13ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ.

14ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.

15ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.

16ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.

17“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;

18ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.

ಮಾರ್ಕನು 16

ಇಂಗ್ಲಿಷ್‌ನಲ್ಲಿ

Berean Standard BibleMark 16:15And He said to them, “Go into all the world and preach the gospel to every creature.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಮತ್ತಾ 28:19ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.
ಮಾರ್ಕ 13:10ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.
ಅ. ಕೃ 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.
ಲೂಕ 24:47–48ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ. ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ.
ಕೀರ್ತ 96:3ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.
ಯೋಹಾ 15:16ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.
1 ಯೋಹಾ 4:14ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.
ಯೋಹಾ 20:21ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು