Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 11:28

ಬೈಬಲ್ ವಚನ · IRV

ಮತ್ತಾಯನು 11:28

“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.

ಇಡೀ ಅಧ್ಯಾಯ ಓದಿ: ಮತ್ತಾಯನು 11

ಸಂದರ್ಭದಲ್ಲಿ

25ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.

26ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.

27ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.

28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.

29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.

30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.

ಮತ್ತಾಯನು 11

ಇಂಗ್ಲಿಷ್‌ನಲ್ಲಿ

Berean Standard BibleMatthew 11:28Come to Me, all you who are weary and burdened, and I will give you rest.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಯೋಹಾ 7:37ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ಯೋಹಾ 6:37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.
ಗಲಾ 5:1ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.
ಯೆಶಾ 55:1–3“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ. ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.
ಪ್ರಕ 22:17ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.
ಯೆರೆ 6:16ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
ಯೆಶಾ 48:17–18ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು. ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು