Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 12:36

ಬೈಬಲ್ ವಚನ · IRV

ಮತ್ತಾಯನು 12:36

ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.

ಇಡೀ ಅಧ್ಯಾಯ ಓದಿ: ಮತ್ತಾಯನು 12

ಸಂದರ್ಭದಲ್ಲಿ

33“ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.

34ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.

35ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.

36ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.

37ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು.

38ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, “ಬೋಧಕನೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು” ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ,

39“ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ.

ಮತ್ತಾಯನು 12

ಇಂಗ್ಲಿಷ್‌ನಲ್ಲಿ

Berean Standard BibleMatthew 12:36But I tell you that men will give an account on the day of judgment for every careless word they have spoken.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಪ್ರಸ 12:14ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
ರೋಮಾ 2:16ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.
ಪ್ರಕ 20:12ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.
ಯೂದ 1:14–15ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು, ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು