Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 18:15–17

ಬೈಬಲ್ ವಚನ · IRV

ಮತ್ತಾಯನು 18:15–17

15“ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.

16ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.

17ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

ಇಡೀ ಅಧ್ಯಾಯ ಓದಿ: ಮತ್ತಾಯನು 18

ಸಂದರ್ಭದಲ್ಲಿ

12“ನಿಮ್ಮಲ್ಲಿ ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?

13ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

14ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.

15“ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.

16ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.

17ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

18“ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

19ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.

20ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.

ಮತ್ತಾಯನು 18

ಇಂಗ್ಲಿಷ್‌ನಲ್ಲಿ

Berean Standard BibleMatthew 18:15–17If your brother sins against you, go and confront him privately. If he listens to you, you have won your brother over. But if he will not listen, take one or two others along, so that ‘every matter may be established by the testimony of two or three witnesses.’ If he refuses to listen to them, tell it to the church. And if he refuses to listen even to the church, regard him as you would a pagan or a tax collector.

ಹಳೆಯ ಒಡಂಬಡಿಕೆಯಿಂದ ಉಲ್ಲೇಖ

ಧರ್ಮೋ 19:15ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಯಾಜ 19:17“‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.
ಗಲಾ 6:1ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
ಲೂಕ 17:3–4ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು. ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
2 ಥೆಸ 3:15ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.
ಕೊಲೊ 3:13ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.
ಯಾಕೋ 5:19–20ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ; ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.
2 ಕೊರಿ 13:1ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು