Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 18:6

ಬೈಬಲ್ ವಚನ · IRV

ಮತ್ತಾಯನು 18:6

ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.

ಇಡೀ ಅಧ್ಯಾಯ ಓದಿ: ಮತ್ತಾಯನು 18

ಸಂದರ್ಭದಲ್ಲಿ

3ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

4ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.

5ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.

6ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.

7“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.

8ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.

9ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.

ಮತ್ತಾಯನು 18

ಇಂಗ್ಲಿಷ್‌ನಲ್ಲಿ

Berean Standard BibleMatthew 18:6But if anyone causes one of these little ones who believe in Me to stumble, it would be better for him to have a large millstone hung around his neck and to be drowned in the depths of the sea.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಮಾರ್ಕ 9:42ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.
ಲೂಕ 17:1–2ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ? ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.
ಮತ್ತಾ 18:10ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
2 ಥೆಸ 1:6–9ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ. ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು. ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು. ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.
ಮತ್ತಾ 18:14ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
ರೋಮಾ 15:1–3ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು. ಯಾಕೆಂದರೆ ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ.
ಕೀರ್ತ 105:15“ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು.
1 ಕೊರಿ 8:9–13ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ. ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ. ಹೀಗೆ ಈ ನಿನ್ನ ಜ್ಞಾನದಿಂದ ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ. ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ. ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು