Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 19:4–6

ಬೈಬಲ್ ವಚನ · IRV

ಮತ್ತಾಯನು 19:4–6

4ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,

5‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’

6ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು.

ಇಡೀ ಅಧ್ಯಾಯ ಓದಿ: ಮತ್ತಾಯನು 19

ಸಂದರ್ಭದಲ್ಲಿ

1ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.

2ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು, ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು.

3ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,

4ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,

5‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’

6ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು.

7ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.

8ಅದಕ್ಕೆ ಯೇಸು ಅವರಿಗೆ, “ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.

9ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.

ಮತ್ತಾಯನು 19

ಇಂಗ್ಲಿಷ್‌ನಲ್ಲಿ

Berean Standard BibleMatthew 19:4–6Jesus answered, “Have you not read that from the beginning the Creator ‘made them male and female,’ and said, ‘For this reason a man will leave his father and mother and be united to his wife, and the two will become one flesh’? So they are no longer two, but one flesh. Therefore what God has joined together, let man not separate.”

ಹಳೆಯ ಒಡಂಬಡಿಕೆಯಿಂದ ಉಲ್ಲೇಖ

ಆದಿ 1:27ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
ಆದಿ 2:24ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಆದಿ 2:21–24ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು. ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ, “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
ಆದಿ 2:23“ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು.
1 ಕೊರಿ 7:4ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು.
1 ಕೊರಿ 7:2ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.
ಆದಿ 5:2ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು.
ಇಬ್ರಿ 13:4ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
ಮಾರ್ಕ 10:9ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು