ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 28:19
ಬೈಬಲ್ ವಚನ · IRV
ಮತ್ತಾಯನು 28:19
ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.
ಸಂದರ್ಭದಲ್ಲಿ
16ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.
17ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.
18ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.
19ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.
20ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
ಇಂಗ್ಲಿಷ್ನಲ್ಲಿ
Therefore go and make disciples of all nations, baptizing them in the name of the Father, and of the Son, and of the Holy Spirit,ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ. ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ. ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ.ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು. ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು, ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.ನಡೆದ ಸಂಗತಿಯನ್ನು ಪೇತ್ರನು ನೋಡಿ; “ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?” ಎಂದು ಹೇಳಿ ಅವರಿಗೆ, ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು