Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 5:16

ಬೈಬಲ್ ವಚನ · IRV

ಮತ್ತಾಯನು 5:16

ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.

ಇಡೀ ಅಧ್ಯಾಯ ಓದಿ: ಮತ್ತಾಯನು 5

ಸಂದರ್ಭದಲ್ಲಿ

13“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.

14ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.

15ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.

16ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.

17“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.

18ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.

19ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.

ಮತ್ತಾಯನು 5

ಇಂಗ್ಲಿಷ್‌ನಲ್ಲಿ

Berean Standard BibleMatthew 5:16In the same way, let your light shine before men, that they may see your good deeds and glorify your Father in heaven.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಪೇತ್ರ 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
ತೀತ 2:7ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;
ಯೋಹಾ 15:8ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.
1 ಯೋಹಾ 1:5–7ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ. ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ. ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
ಫಿಲಿಪ್ಪಿ 2:15–16ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.
ಎಫೆ 5:8ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.
ಯೆಶಾ 60:1–3ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ. ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು. ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.
1 ಪೇತ್ರ 3:16ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು