Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 5:22

ಬೈಬಲ್ ವಚನ · IRV

ಮತ್ತಾಯನು 5:22

ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.

ಇಡೀ ಅಧ್ಯಾಯ ಓದಿ: ಮತ್ತಾಯನು 5

ಸಂದರ್ಭದಲ್ಲಿ

19ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.

20ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.

21“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.

22ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.

23ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,

24ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.

25“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.

ಮತ್ತಾಯನು 5

ಇಂಗ್ಲಿಷ್‌ನಲ್ಲಿ

Berean Standard BibleMatthew 5:22But I tell you that anyone who is angry with his brother will be subject to judgment. Again, anyone who says to his brother, ‘Raca,’ will be subject to the Sanhedrin. But anyone who says, ‘You fool!’ will be subject to the fire of hell.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಯೋಹಾ 3:14–15ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.
1 ಯೋಹಾ 4:20–21ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು? ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.
1 ಯೋಹಾ 2:9ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
ಎಫೆ 4:26–27“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ. ಸೈತಾನನಿಗೆ ಅವಕಾಶಕೊಡಬೇಡಿರಿ.
ಎಫೆ 4:31–32ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ಯಾಕೋ 3:6ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.
ತೀತ 3:2ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.
ಮತ್ತಾ 10:28ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು