ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 5:28
ಬೈಬಲ್ ವಚನ · IRV
ಮತ್ತಾಯನು 5:28
ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.
ಸಂದರ್ಭದಲ್ಲಿ
25“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.
26ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
27“‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ.
28ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.
29ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
30ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
31ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.
ಇಂಗ್ಲಿಷ್ನಲ್ಲಿ
But I tell you that anyone who looks at a woman to lust after her has already committed adultery with her in his heart.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.“ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.“ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು