ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 5:37
ಬೈಬಲ್ ವಚನ · IRV
ಮತ್ತಾಯನು 5:37
ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ.
ಸಂದರ್ಭದಲ್ಲಿ
34ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು.
35ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ; ಅದು ಆ ಮಹಾ ರಾಜನ ಪಟ್ಟಣವಾಗಿದೆ.
36ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.
37ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ.
38“‘ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು’ ಎಂದು ಹೇಳಿರುವುದು ಕೇಳಿದ್ದೀರಷ್ಟೆ.
39ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.
40ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು.
ಇಂಗ್ಲಿಷ್ನಲ್ಲಿ
Simply let your ‘Yes’ be ‘Yes,’ and your ‘No,’ ‘No.’ Anything more comes from the evil one.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಮುಖ್ಯವಾಗಿ ನನ್ನ ಸಹೋದರರೇ, ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.ಹೀಗೆ ಯೋಚಿಸಿದ್ದರಿಂದ ನಾನು ಚಂಚಲಚಿತ್ತನಾಗಿದ್ದೇನೋ? ಕೇವಲ ಪ್ರಾಪಂಚಿಕ ಗುಣಮಟ್ಟಕ್ಕೆ ಯೋಚಿಸಿ ಈ ಕ್ಷಣ “ಹೌದು” ಮರು ಕ್ಷಣ “ಇಲ್ಲ” ಎಂದು ಹೇಳುವವನಂತಿದ್ದೇನೋ? ಎಂದಿಗೂ ಇಲ್ಲ. ದೇವರು ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ. ನಾನೂ, ಸಿಲ್ವಾನನೂ, ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಈ ಕ್ಷಣ “ಹೌದು” ಮರುಕ್ಷಣ “ಇಲ್ಲ” ಎಂದು ಹೇಳುವವನಲ್ಲ. ಆತನಲ್ಲಿ ಹೌದೆಂಬುದೇ ನೆಲೆಗೊಂಡಿದೆ. ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ.ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು