Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 5:44

ಬೈಬಲ್ ವಚನ · IRV

ಮತ್ತಾಯನು 5:44

ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.

ಇಡೀ ಅಧ್ಯಾಯ ಓದಿ: ಮತ್ತಾಯನು 5

ಸಂದರ್ಭದಲ್ಲಿ

41ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು.

42ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.

43“‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.

44ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.

45ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.

46ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.

47ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.

ಮತ್ತಾಯನು 5

ಇಂಗ್ಲಿಷ್‌ನಲ್ಲಿ

Berean Standard BibleMatthew 5:44But I tell you, love your enemies and pray for those who persecute you,

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ರೋಮಾ 12:14ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.
1 ಪೇತ್ರ 3:9ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.
ಲೂಕ 6:27–28“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ; ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.
ರೋಮಾ 12:20–21ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.
ಜ್ಞಾನೋ 25:21–22ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು, ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು.
ಲೂಕ 23:34ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.
1 ಪೇತ್ರ 2:23ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.
ಅ. ಕೃ 7:60ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು