Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 6:1–4

ಬೈಬಲ್ ವಚನ · IRV

ಮತ್ತಾಯನು 6:1–4

1“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ.

2“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

3ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ.

4ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.

ಇಡೀ ಅಧ್ಯಾಯ ಓದಿ: ಮತ್ತಾಯನು 6

ಸಂದರ್ಭದಲ್ಲಿ

1“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ.

2“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

3ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ.

4ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.

5“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

6ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.

7ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ.

ಮತ್ತಾಯನು 6

ಇಂಗ್ಲಿಷ್‌ನಲ್ಲಿ

Berean Standard BibleMatthew 6:1–4“Be careful not to perform your righteous acts before men to be seen by them. If you do, you will have no reward from your Father in heaven. So when you give to the needy, do not sound a trumpet before you, as the hypocrites do in the synagogues and on the streets, to be honored by men. Truly I tell you, they already have their full reward. But when you give to the needy, do not let your left hand know what your right hand is doing, so that your giving may be in secret. And your Father, who sees what is done in secret, will reward you.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಮತ್ತಾ 23:5ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.
ಯೋಹಾ 12:43ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.
ಇಬ್ರಿ 6:10ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
ಮತ್ತಾ 23:28–30ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ. ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ, ‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.
ಲೂಕ 16:15ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
ಮತ್ತಾ 6:18ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.
ಗಲಾ 6:12ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು