ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 6:14–15
ಬೈಬಲ್ ವಚನ · IRV
ಮತ್ತಾಯನು 6:14–15
14ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.
15ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
ಸಂದರ್ಭದಲ್ಲಿ
11ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.
12ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು.
13ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು
14ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.
15ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
16“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
17ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ.
18ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.
ಇಂಗ್ಲಿಷ್ನಲ್ಲಿ
For if you forgive men their trespasses, your heavenly Father will also forgive you. But if you do not forgive men their trespasses, neither will your Father forgive yours.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು