Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 6:19–21

ಬೈಬಲ್ ವಚನ · IRV

ಮತ್ತಾಯನು 6:19–21

19“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.

20ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,

21ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.

ಇಡೀ ಅಧ್ಯಾಯ ಓದಿ: ಮತ್ತಾಯನು 6

ಸಂದರ್ಭದಲ್ಲಿ

16“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

17ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ.

18ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.

19“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.

20ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,

21ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.

22“ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.

23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!

24“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.

ಮತ್ತಾಯನು 6

ಇಂಗ್ಲಿಷ್‌ನಲ್ಲಿ

Berean Standard BibleMatthew 6:19–21Do not store up for yourselves treasures on earth, where moth and rust destroy, and where thieves break in and steal. But store up for yourselves treasures in heaven, where moth and rust do not destroy, and where thieves do not break in and steal. For where your treasure is, there your heart will be also.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೊಲೊ 3:1–3ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ. ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.
ಇಬ್ರಿ 13:5ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
ಲೂಕ 12:34ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.
2 ಕೊರಿ 4:18ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.
1 ಯೋಹಾ 2:15–16ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
ಲೂಕ 12:21ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು.
ಜ್ಞಾನೋ 4:23ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.
ಜ್ಞಾನೋ 23:4–5ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ. ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು