Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 6:24

ಬೈಬಲ್ ವಚನ · IRV

ಮತ್ತಾಯನು 6:24

“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.

ಇಡೀ ಅಧ್ಯಾಯ ಓದಿ: ಮತ್ತಾಯನು 6

ಸಂದರ್ಭದಲ್ಲಿ

21ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.

22“ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.

23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!

24“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.

25“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.

26ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?

27ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು?

ಮತ್ತಾಯನು 6

ಇಂಗ್ಲಿಷ್‌ನಲ್ಲಿ

Berean Standard BibleMatthew 6:24No one can serve two masters: Either he will hate the one and love the other, or he will be devoted to the one and despise the other. You cannot serve both God and money.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಯೋಹಾ 2:15–16ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
ಲೂಕ 16:13ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು.
ಯಾಕೋ 4:4ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.
1 ತಿಮೊ 6:9–10ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ. ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
ಯೆಹೋ 24:15ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.
ಗಲಾ 1:10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.
ಮತ್ತಾ 4:10ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
ಲೂಕ 16:11ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು?

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು