Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 6:33

ಬೈಬಲ್ ವಚನ · IRV

ಮತ್ತಾಯನು 6:33

ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.

ಇಡೀ ಅಧ್ಯಾಯ ಓದಿ: ಮತ್ತಾಯನು 6

ಸಂದರ್ಭದಲ್ಲಿ

30ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!

31ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.

32ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.

33ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.

34ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.

ಮತ್ತಾಯನು 6

ಇಂಗ್ಲಿಷ್‌ನಲ್ಲಿ

Berean Standard BibleMatthew 6:33But seek first the kingdom of God and His righteousness, and all these things will be added unto you.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಲೂಕ 12:31ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.
ಮತ್ತಾ 5:6ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.
ಯೋಹಾ 6:27ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.
ಕೀರ್ತ 34:9–10ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ. ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.
ಕೀರ್ತ 84:11–12ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ? ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಮಾರ್ಕ 10:29–30ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ, ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.
ರೋಮಾ 14:17ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
ಜ್ಞಾನೋ 3:9–10ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು. ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು