ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 7:1–5
ಬೈಬಲ್ ವಚನ · IRV
ಮತ್ತಾಯನು 7:1–5
1“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.
2ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.
3“ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?
4ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.
5ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.
ಸಂದರ್ಭದಲ್ಲಿ
1“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.
2ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.
3“ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?
4ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.
5ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.
6“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.
7“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;
8ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.
ಇಂಗ್ಲಿಷ್ನಲ್ಲಿ
“Do not judge, or you will be judged. For with the same judgment you pronounce, you will be judged; and with the measure you use, it will be measured to you. Why do you look at the speck in your brother’s eye, but fail to notice the beam in your own eye? How can you say to your brother, ‘Let me take the speck out of your eye,’ while there is still a beam in your own eye? You hypocrite! First take the beam out of your own eye, and then you will see clearly to remove the speck from your brother’s eye.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ. ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ. ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ ನಾಶಮಾಡುವುದಕ್ಕೂ ಸಮರ್ಥನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?“ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು. ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು. ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.ನನಗಾದರೂ ನಿಮ್ಮಿಂದಾಗಲಿ ಅಥವಾ ಮನುಷ್ಯರು ಮಾಡುವ ವಿಚಾರಣೆಯಾಗಲಿ ತೀರಾ ಲಘುವೆನಿಸಿದೆ. ನಾನೂ ನನ್ನನ್ನು ನ್ಯಾಯತೀರ್ಪು ಮಾಡಿಕೊಳ್ಳುವುದಿಲ್ಲ. ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ. ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ” ಎಂದು ಹೇಳಿದನು ತಿರುಗಿ ಆತನು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು. ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು