ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 7:12
ಬೈಬಲ್ ವಚನ · IRV
ಮತ್ತಾಯನು 7:12
ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
ಸಂದರ್ಭದಲ್ಲಿ
9“ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?
10ಮೀನು ಕೇಳಿದರೆ ಹಾವನ್ನು ಕೊಡುವನೋ?
11ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?
12ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
13“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.
14ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.
15“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.
ಇಂಗ್ಲಿಷ್ನಲ್ಲಿ
In everything, then, do to others as you would have them do to you. For this is the essence of the Law and the Prophets.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ. ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ. ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.“‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.ಅದಕ್ಕೆ ಯೇಸು, “‘ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನು ಒಬ್ಬನೇ ದೇವರು. ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ. ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು. ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು. ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು. ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ. ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?“ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ; ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು