Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 7:15

ಬೈಬಲ್ ವಚನ · IRV

ಮತ್ತಾಯನು 7:15

“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.

ಇಡೀ ಅಧ್ಯಾಯ ಓದಿ: ಮತ್ತಾಯನು 7

ಸಂದರ್ಭದಲ್ಲಿ

12ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.

13“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.

14ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.

15“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.

16ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?

17ಹಾಗೆಯೇ ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;

18ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು.

ಮತ್ತಾಯನು 7

ಇಂಗ್ಲಿಷ್‌ನಲ್ಲಿ

Berean Standard BibleMatthew 7:15Beware of false prophets. They come to you in sheep’s clothing, but inwardly they are ravenous wolves.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಯೋಹಾ 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
2 ಪೇತ್ರ 2:1–3ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
ಮತ್ತಾ 24:11ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.
ಅ. ಕೃ 20:29–31ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ. ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು. ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.
ಮಾರ್ಕ 13:22–23ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.
ಧರ್ಮೋ 13:1–3ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ, “ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.
ಕೊಲೊ 2:8ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.
2 ಕೊರಿ 11:13–15ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ, ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು