Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮತ್ತಾಯನು 7:7

ಬೈಬಲ್ ವಚನ · IRV

ಮತ್ತಾಯನು 7:7

“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;

ಇಡೀ ಅಧ್ಯಾಯ ಓದಿ: ಮತ್ತಾಯನು 7

ಸಂದರ್ಭದಲ್ಲಿ

4ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.

5ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.

6“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.

7“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;

8ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.

9“ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?

10ಮೀನು ಕೇಳಿದರೆ ಹಾವನ್ನು ಕೊಡುವನೋ?

ಮತ್ತಾಯನು 7

ಇಂಗ್ಲಿಷ್‌ನಲ್ಲಿ

Berean Standard BibleMatthew 7:7Ask, and it will be given to you; seek, and you will find; knock, and the door will be opened to you.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಮತ್ತಾ 21:22ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.
1 ಯೋಹಾ 3:22ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.
ಯೋಹಾ 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.
ಮಾರ್ಕ 11:24ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
ಕೀರ್ತ 145:18–19ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.
ಯೆರೆ 33:3‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.
ಮತ್ತಾ 6:33ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.
ಯೆರೆ 29:12–13ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು. ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು