ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮೀಕನು 6:8
ಬೈಬಲ್ ವಚನ · IRV
ಮೀಕನು 6:8
ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
ಸಂದರ್ಭದಲ್ಲಿ
5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.
6ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?
7ಸಾವಿರಾರು ಟಗರುಗಳನ್ನೂ, ಲಕ್ಷೋಪಲಕ್ಷ ತೈಲ ಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚುತ್ತಾನೆಯೇ? ನನ್ನ ದ್ರೋಹದ ನಿಮಿತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ? ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?
8ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
9ಯೆಹೋವನ ನಾಮದಲ್ಲಿ ಭಯಭಕ್ತಿಯಿಡುವುದು ಸುಜ್ಞಾನವೇ, ಎಂದು ಯೆರೂಸಲೇಮಿನ ಪಟ್ಟಣಕ್ಕೆ ಎಚ್ಚರಿಕೆ ನೀಡುವ ಯೆಹೋವನ ನುಡಿ. ಬೀಸಿ ಬರುವ ಶಿಕ್ಷೆಯ ದಂಡಕ್ಕೆ ಎಚ್ಚರವಾಗಿರಿ. ಅದನ್ನು ನೇಮಿಸಿದವನು ಯಾರೆಂದು ತಿಳಿದುಕೊಳ್ಳಿರಿ.
10ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ?
11ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ?
ಇಂಗ್ಲಿಷ್ನಲ್ಲಿ
He has shown you, O man, what is good. And what does the LORD require of you but to act justly, to love mercy, and to walk humbly with your God?ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ, ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನುಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು