Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಫಿಲಿಪ್ಪಿಯವರಿಗೆ 2:3

ಬೈಬಲ್ ವಚನ · IRV

ಫಿಲಿಪ್ಪಿಯವರಿಗೆ 2:3

ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.

ಇಡೀ ಅಧ್ಯಾಯ ಓದಿ: ಫಿಲಿಪ್ಪಿಯವರಿಗೆ 2

ಸಂದರ್ಭದಲ್ಲಿ

1ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ,

2ನೀವೆಲ್ಲರು ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ.

3ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.

4ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.

5ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.

6ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,

ಫಿಲಿಪ್ಪಿಯವರಿಗೆ 2

ಇಂಗ್ಲಿಷ್‌ನಲ್ಲಿ

Berean Standard BiblePhilippians 2:3Do nothing out of selfish ambition or empty pride, but in humility consider others more important than yourselves.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ರೋಮಾ 12:10ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
ಗಲಾ 5:26ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.
ಎಫೆ 5:21ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.
ಎಫೆ 4:2ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
1 ಪೇತ್ರ 5:5ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”
ಯಾಕೋ 3:14–16ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.
ಯಾಕೋ 4:5–6ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ? ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.
ಫಿಲಿಪ್ಪಿ 2:14ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು