ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಫಿಲಿಪ್ಪಿಯವರಿಗೆ 3:13
ಬೈಬಲ್ ವಚನ · IRV
ಫಿಲಿಪ್ಪಿಯವರಿಗೆ 3:13
ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ,
ಇಡೀ ಅಧ್ಯಾಯ ಓದಿ: ಫಿಲಿಪ್ಪಿಯವರಿಗೆ 3
ಸಂದರ್ಭದಲ್ಲಿ
10ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.
11ಹೀಗಾದರೆ ಸತ್ತವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನದ ಅನುಭವ ನನಗೂ ಆದೀತು.
12ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ.
13ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ,
14ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.
15ನಮ್ಮಲ್ಲಿ ಪ್ರವೀಣರಾದವರೆಲ್ಲರೂ ಈ ವಿಷಯದಲ್ಲಿ ಇದೇ ಅಭಿಪ್ರಾಯವುಳ್ಳವರಾಗಿರಿ. ಮತ್ತು ಯಾವುದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನು ದೇವರು ನಿಮಗೆ ತೋರಿಸಿಕೊಡುವನು.
16ಅಂತೂ, ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯ ವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.
ಇಂಗ್ಲಿಷ್ನಲ್ಲಿ
Brothers, I do not consider myself yet to have taken hold of it. But one thing I do: Forgetting what is behind and straining toward what is ahead,ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು.ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ. ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ. ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ. ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ. ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ. ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು