ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಫಿಲಿಪ್ಪಿಯವರಿಗೆ 4:13
ಬೈಬಲ್ ವಚನ · IRV
ಫಿಲಿಪ್ಪಿಯವರಿಗೆ 4:13
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಇಡೀ ಅಧ್ಯಾಯ ಓದಿ: ಫಿಲಿಪ್ಪಿಯವರಿಗೆ 4
ಸಂದರ್ಭದಲ್ಲಿ
10ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.
11ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.
12ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ.
13ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
14ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು.
15ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ.
16ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ.
ಇಂಗ್ಲಿಷ್ನಲ್ಲಿ
ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ. ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು. ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.ನಮಗೆ ಇಂಥ ಭರವಸೆಯು ಕ್ರಿಸ್ತನ ಮೂಲಕವೇ ದೇವರಲ್ಲಿದೆ. ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು