ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಫಿಲಿಪ್ಪಿಯವರಿಗೆ 4:19
ಬೈಬಲ್ ವಚನ · IRV
ಫಿಲಿಪ್ಪಿಯವರಿಗೆ 4:19
ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.
ಇಡೀ ಅಧ್ಯಾಯ ಓದಿ: ಫಿಲಿಪ್ಪಿಯವರಿಗೆ 4
ಸಂದರ್ಭದಲ್ಲಿ
16ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ.
17ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.
18ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.
19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.
20ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್.
21ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
22ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.
ಇಂಗ್ಲಿಷ್ನಲ್ಲಿ
And my God will supply all your needs according to His glorious riches in Christ Jesus.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು. “ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.” ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು. ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು. ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು. ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು. ಆ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹಳೇಯದಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು