Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಫಿಲಿಪ್ಪಿಯವರಿಗೆ 4:6–7

ಬೈಬಲ್ ವಚನ · IRV

ಫಿಲಿಪ್ಪಿಯವರಿಗೆ 4:6–7

6ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.

7ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.

ಇಡೀ ಅಧ್ಯಾಯ ಓದಿ: ಫಿಲಿಪ್ಪಿಯವರಿಗೆ 4

ಸಂದರ್ಭದಲ್ಲಿ

3ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.

4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.

5ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.

6ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.

7ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.

8ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.

9ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.

10ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.

ಫಿಲಿಪ್ಪಿಯವರಿಗೆ 4

ಇಂಗ್ಲಿಷ್‌ನಲ್ಲಿ

Berean Standard BiblePhilippians 4:6–7Be anxious for nothing, but in everything, by prayer and petition, with thanksgiving, present your requests to God. And the peace of God, which surpasses all understanding, will guard your hearts and your minds in Christ Jesus.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಜ್ಞಾನೋ 3:5–6ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
1 ಪೇತ್ರ 5:7ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
ಕೀರ್ತ 55:22ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.
1 ಥೆಸ 5:17–18ಎಡೆಬಿಡದೆ ಪ್ರಾರ್ಥನೆಮಾಡಿರಿ, ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
ಮತ್ತಾ 7:7–8“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು; ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.
ಕೀರ್ತ 34:5–7ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ. ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು. ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
ಮತ್ತಾ 6:8ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ.
ಯೋಹಾ 14:27“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು