Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಫಿಲಿಪ್ಪಿಯವರಿಗೆ 4:8

ಬೈಬಲ್ ವಚನ · IRV

ಫಿಲಿಪ್ಪಿಯವರಿಗೆ 4:8

ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.

ಇಡೀ ಅಧ್ಯಾಯ ಓದಿ: ಫಿಲಿಪ್ಪಿಯವರಿಗೆ 4

ಸಂದರ್ಭದಲ್ಲಿ

5ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.

6ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.

7ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.

8ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.

9ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.

10ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.

11ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.

ಫಿಲಿಪ್ಪಿಯವರಿಗೆ 4

ಇಂಗ್ಲಿಷ್‌ನಲ್ಲಿ

Berean Standard BiblePhilippians 4:8Finally, brothers, whatever is true, whatever is honorable, whatever is right, whatever is pure, whatever is lovely, whatever is admirable—if anything is excellent or praiseworthy—think on these things.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಯಾಕೋ 3:17ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.
ತೀತ 2:7ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;
2 ಕೊರಿ 8:21ಯಾಕೆಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡುವುದು ನಮ್ಮ ಉದ್ದೇಶ.
ಗಲಾ 5:22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
1 ಥೆಸ 5:21–22ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ. ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.
2 ಪೇತ್ರ 1:3–7ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು. ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ. ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ, ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ, ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.
ಎಫೆ 5:9ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.
ಇಬ್ರಿ 13:18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು