ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಜ್ಞಾನೋಕ್ತಿಗಳು 13:11
ಬೈಬಲ್ ವಚನ · IRV
ಜ್ಞಾನೋಕ್ತಿಗಳು 13:11
ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.
ಇಡೀ ಅಧ್ಯಾಯ ಓದಿ: ಜ್ಞಾನೋಕ್ತಿಗಳು 13
ಸಂದರ್ಭದಲ್ಲಿ
8ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ.
9ಶಿಷ್ಟರ ಬೆಳಕು ಬೆಳಗುವುದು, ದುಷ್ಟರ ದೀಪವು ಆರುವುದು.
10ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
11ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.
12ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.
13ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.
14ಜ್ಞಾನಿಯ ಬೋಧನೆ ಜೀವದ ಬುಗ್ಗೆ, ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.
ಇಂಗ್ಲಿಷ್ನಲ್ಲಿ
Dishonest wealth will dwindle, but what is earned through hard work will be multiplied.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು.ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು