ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಜ್ಞಾನೋಕ್ತಿಗಳು 16:3
ಬೈಬಲ್ ವಚನ · IRV
ಜ್ಞಾನೋಕ್ತಿಗಳು 16:3
ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, ನಿನ್ನ ಉದ್ದೇಶಗಳು ಸಫಲವಾಗುವವು.
ಇಡೀ ಅಧ್ಯಾಯ ಓದಿ: ಜ್ಞಾನೋಕ್ತಿಗಳು 16
ಸಂದರ್ಭದಲ್ಲಿ
1ಹೃದಯದ ಸಂಕಲ್ಪವು ಮನುಷ್ಯನ ವಶವು, ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.
2ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ, ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.
3ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, ನಿನ್ನ ಉದ್ದೇಶಗಳು ಸಫಲವಾಗುವವು.
4ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.
5ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ.
6ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.
ಇಂಗ್ಲಿಷ್ನಲ್ಲಿ
ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು. ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.ಯಾವುದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವುದು, ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.(ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು.ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು