Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಜ್ಞಾನೋಕ್ತಿಗಳು 16:9

ಬೈಬಲ್ ವಚನ · IRV

ಜ್ಞಾನೋಕ್ತಿಗಳು 16:9

ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.

ಇಡೀ ಅಧ್ಯಾಯ ಓದಿ: ಜ್ಞಾನೋಕ್ತಿಗಳು 16

ಸಂದರ್ಭದಲ್ಲಿ

6ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.

7ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.

8ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.

9ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.

10ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು.

11ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ.

12ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು, ಅಧರ್ಮವನ್ನಾಚರಿಸಲು ಅಸಹ್ಯಪಡುವರು.

ಜ್ಞಾನೋಕ್ತಿಗಳು 16

ಇಂಗ್ಲಿಷ್‌ನಲ್ಲಿ

Berean Standard BibleProverbs 16:9A man’s heart plans his course, but the LORD determines his steps.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಜ್ಞಾನೋ 19:21ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
ಕೀರ್ತ 37:23ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
ಜ್ಞಾನೋ 16:1ಹೃದಯದ ಸಂಕಲ್ಪವು ಮನುಷ್ಯನ ವಶವು, ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.
ಜ್ಞಾನೋ 20:24ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?
ಯೆರೆ 10:23ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು. ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು.
ಜ್ಞಾನೋ 21:30ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
ಯೆಶಾ 46:10ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು