ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಜ್ಞಾನೋಕ್ತಿಗಳು 18:22
ಬೈಬಲ್ ವಚನ · IRV
ಜ್ಞಾನೋಕ್ತಿಗಳು 18:22
ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.
ಇಡೀ ಅಧ್ಯಾಯ ಓದಿ: ಜ್ಞಾನೋಕ್ತಿಗಳು 18
ಸಂದರ್ಭದಲ್ಲಿ
19ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
20ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.
21ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
22ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.
23ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.
24ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.
ಇಂಗ್ಲಿಷ್ನಲ್ಲಿ
He who finds a wife finds a good thing and obtains favor from the LORD.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ, ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು.ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು.ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು. ತರುವಾಯ ಯಾಕೋಬನು ಲಾಬಾನನಿಗೆ, “ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು” ಎಂದು ಕೇಳಿದನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು