Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಜ್ಞಾನೋಕ್ತಿಗಳು 20:1

ಬೈಬಲ್ ವಚನ · IRV

ಜ್ಞಾನೋಕ್ತಿಗಳು 20:1

ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.

ಇಡೀ ಅಧ್ಯಾಯ ಓದಿ: ಜ್ಞಾನೋಕ್ತಿಗಳು 20

ಸಂದರ್ಭದಲ್ಲಿ

1ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.

2ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.

3ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.

4ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?

ಜ್ಞಾನೋಕ್ತಿಗಳು 20

ಇಂಗ್ಲಿಷ್‌ನಲ್ಲಿ

Berean Standard BibleProverbs 20:1Wine is a mocker, strong drink is a brawler, and whoever is led astray by them is not wise.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಎಫೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,
ಹೋಶೇ 4:11ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.
ಯೆಶಾ 28:7ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.
1 ಕೊರಿ 6:10ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
ಜ್ಞಾನೋ 31:4ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.
ಗಲಾ 5:21ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
ಹಬ 2:15–16‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ! ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು