ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಜ್ಞಾನೋಕ್ತಿಗಳು 22:6
ಬೈಬಲ್ ವಚನ · IRV
ಜ್ಞಾನೋಕ್ತಿಗಳು 22:6
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
ಇಡೀ ಅಧ್ಯಾಯ ಓದಿ: ಜ್ಞಾನೋಕ್ತಿಗಳು 22
ಸಂದರ್ಭದಲ್ಲಿ
3ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
4ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
5ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.
6ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
7ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
8ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.
9ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.
ಇಂಗ್ಲಿಷ್ನಲ್ಲಿ
Train up a child in the way he should go, and when he is old he will not depart from it.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ, ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು. ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು, ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು, ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, “ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ; ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು