ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಜ್ಞಾನೋಕ್ತಿಗಳು 22:7
ಬೈಬಲ್ ವಚನ · IRV
ಜ್ಞಾನೋಕ್ತಿಗಳು 22:7
ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
ಇಡೀ ಅಧ್ಯಾಯ ಓದಿ: ಜ್ಞಾನೋಕ್ತಿಗಳು 22
ಸಂದರ್ಭದಲ್ಲಿ
4ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
5ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.
6ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
7ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
8ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.
9ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.
10ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.
ಇಂಗ್ಲಿಷ್‌ನಲ್ಲಿ
The rich rule over the poor, and the borrower is slave to the lender.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು