Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಜ್ಞಾನೋಕ್ತಿಗಳು 29:11

ಬೈಬಲ್ ವಚನ · IRV

ಜ್ಞಾನೋಕ್ತಿಗಳು 29:11

ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.

ಇಡೀ ಅಧ್ಯಾಯ ಓದಿ: ಜ್ಞಾನೋಕ್ತಿಗಳು 29

ಸಂದರ್ಭದಲ್ಲಿ

8ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು, ಜ್ಞಾನಿಗಳೋ ರೋಷಾಗ್ನಿಯನ್ನು ಆರಿಸುವರು.

9ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ.

10ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು.

11ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.

12ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.

13ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು.

14ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು.

ಜ್ಞಾನೋಕ್ತಿಗಳು 29

ಇಂಗ್ಲಿಷ್‌ನಲ್ಲಿ

Berean Standard BibleProverbs 29:11A fool vents all his anger, but a wise man holds it back.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಜ್ಞಾನೋ 19:11ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.
ಜ್ಞಾನೋ 12:16ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು.
ಮೀಕ 7:5ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು