ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಜ್ಞಾನೋಕ್ತಿಗಳು 3:5–6
ಬೈಬಲ್ ವಚನ · IRV
ಜ್ಞಾನೋಕ್ತಿಗಳು 3:5–6
5ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
6ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ಇಡೀ ಅಧ್ಯಾಯ ಓದಿ: ಜ್ಞಾನೋಕ್ತಿಗಳು 3
ಸಂದರ್ಭದಲ್ಲಿ
2ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು.
3ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
4ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.
5ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
6ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
7ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
8ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು.
9ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.
ಇಂಗ್ಲಿಷ್ನಲ್ಲಿ
Trust in the LORD with all your heart, and lean not on your own understanding; in all your ways acknowledge Him, and He will make your paths straight.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು. ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ. ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು