Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಜ್ಞಾನೋಕ್ತಿಗಳು 31:30

ಬೈಬಲ್ ವಚನ · IRV

ಜ್ಞಾನೋಕ್ತಿಗಳು 31:30

ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.

ಇಡೀ ಅಧ್ಯಾಯ ಓದಿ: ಜ್ಞಾನೋಕ್ತಿಗಳು 31

ಸಂದರ್ಭದಲ್ಲಿ

27ಸೋಮಾರಿತನದ ಅನ್ನವನ್ನು ತಿನ್ನದೆ, ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು.

28ಮಕ್ಕಳು ಎದ್ದುನಿಂತು ಆಕೆಯನ್ನು “ಧನ್ಯಳು” ಎಂದು ಹೇಳುವರು.

29ಪತಿಯು ಸಹ, “ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು” ಎಂದು ಆಕೆಯನ್ನು ಕೊಂಡಾಡುವನು.

30ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.

31ಆಕೆಯ ಕೈಕೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ, ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ.

ಜ್ಞಾನೋಕ್ತಿಗಳು 31

ಇಂಗ್ಲಿಷ್‌ನಲ್ಲಿ

Berean Standard BibleProverbs 31:30Charm is deceptive and beauty is fleeting, but a woman who fears the LORD is to be praised.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಜ್ಞಾನೋ 1:7ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
1 ಪೇತ್ರ 3:4–5ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು.
ಜ್ಞಾನೋ 11:22ಹಂದಿಯ ಮೂಗಿಗೆ ಚಿನ್ನದ ಮೂಗುತಿಯು ಹೇಗೋ, ಅವಿವೇಕಳಿಗೆ ಸೌಂದರ್ಯವು ಹಾಗೆ.
ಜ್ಞಾನೋ 8:13ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
1 ಪೇತ್ರ 1:24ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
1 ಕೊರಿ 4:5ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
ಎಸ್ತೇ 1:11–12“ವಷ್ಟಿ ರಾಣಿಯು ರಾಜಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ” ಎಂದು ಆಜ್ಞಾಪಿಸಿದನು. ಅವಳು ಅತಿ ಸೌಂದರ್ಯವತಿಯಾಗಿದ್ದಳು. ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.
ಕೀರ್ತ 147:11ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು