ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಜ್ಞಾನೋಕ್ತಿಗಳು 6:16–19
ಬೈಬಲ್ ವಚನ · IRV
ಜ್ಞಾನೋಕ್ತಿಗಳು 6:16–19
16ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.
17ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,
18ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು,
19ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.
ಇಡೀ ಅಧ್ಯಾಯ ಓದಿ: ಜ್ಞಾನೋಕ್ತಿಗಳು 6
ಸಂದರ್ಭದಲ್ಲಿ
13ಕಣ್ಣನ್ನು ಮಿಟಕಿಸುತ್ತಾನೆ, ಕಾಲಿನಿಂದ ಕೆರೆಯುತ್ತಾನೆ, ಬೆರಳ ಸನ್ನೆಮಾಡುತ್ತಾನೆ.
14ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ.
15ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.
16ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.
17ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,
18ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು,
19ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.
20ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ.
21ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ.
22ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.
ಇಂಗ್ಲಿಷ್ನಲ್ಲಿ
There are six things that the LORD hates, seven that are detestable to Him: haughty eyes, a lying tongue, hands that shed innocent blood, a heart that devises wicked schemes, feet that run swiftly to evil, a false witness who gives false testimony, and one who stirs up discord among brothers.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು. ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು