ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೀರ್ತನೆ 1
ಬೈಬಲ್ ವಚನ · IRV
ಕೀರ್ತನೆ 1
1ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
2ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.
3ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.
4ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.
5ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ.
6ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.
ಇಂಗ್ಲಿಷ್ನಲ್ಲಿ
Blessed is the man who does not walk in the counsel of the wicked, or set foot on the path of sinners, or sit in the seat of mockers. But his delight is in the Law of the LORD, and on His law he meditates day and night. He is like a tree planted by streams of water, yielding its fruit in season, whose leaf does not wither, and who prospers in all he does. Not so the wicked! For they are like chaff driven off by the wind. Therefore the wicked will not stand in the judgment, nor sinners in the assembly of the righteous. For the LORD guards the path of the righteous, but the way of the wicked will perish.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ. ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ. ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು. ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ. ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ. ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು