Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೀರ್ತನೆ 119:105

ಬೈಬಲ್ ವಚನ · IRV

ಕೀರ್ತನೆ 119:105

ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ.

ಇಡೀ ಅಧ್ಯಾಯ ಓದಿ: ಕೀರ್ತನೆ 119

ಸಂದರ್ಭದಲ್ಲಿ

102ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, ಏಕೆಂದರೆ ನೀನು ನನಗೆ ಬೋಧಿಸಿದ್ದೀ.

103ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.

104ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ.

105ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ.

106ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.

107ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ, ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.

108ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು, ದಯವಿಟ್ಟು ಅಂಗೀಕರಿಸು, ನಿನ್ನ ವಿಧಿಗಳನ್ನು ನನಗೆ ಕಲಿಸು.

ಕೀರ್ತನೆ 119

ಇಂಗ್ಲಿಷ್‌ನಲ್ಲಿ

Berean Standard BiblePsalm 119:105Your word is a lamp to my feet and a light to my path.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಜ್ಞಾನೋ 6:23ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.
ಕೀರ್ತ 43:3ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ.
ಕೀರ್ತ 18:28ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.
2 ಪೇತ್ರ 1:19ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.
ಯೋಬ 29:3ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.
ಕೀರ್ತ 19:8ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
ಎಫೆ 5:13ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು