Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೀರ್ತನೆ 127:3–5

ಬೈಬಲ್ ವಚನ · IRV

ಕೀರ್ತನೆ 127:3–5

3ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.

4ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;

5ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.

ಇಡೀ ಅಧ್ಯಾಯ ಓದಿ: ಕೀರ್ತನೆ 127

ಸಂದರ್ಭದಲ್ಲಿ

1ಯಾತ್ರಾಗೀತೆ; ಸೊಲೊಮೋನನದು. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.

2ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.

3ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.

4ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;

5ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.

ಕೀರ್ತನೆ 127

ಇಂಗ್ಲಿಷ್‌ನಲ್ಲಿ

Berean Standard BiblePsalm 127:3–5Children are indeed a heritage from the LORD, and the fruit of the womb is His reward. Like arrows in the hand of a warrior, so are children born in one’s youth. Blessed is the man whose quiver is full of them. He will not be put to shame when he confronts the enemies at the gate.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೀರ್ತ 128:3–4ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು. ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು.
ಧರ್ಮೋ 28:4ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.
1 ಸಮು 1:27ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;
ಆದಿ 48:4ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’” ಎಂದು ಹೇಳಿದನು.
ಆದಿ 33:5ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು.
ಯೆಶಾ 8:18ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.
ಆದಿ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
1 ಸಮು 1:19–20ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು. ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು