Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೀರ್ತನೆ 139:13–16

ಬೈಬಲ್ ವಚನ · IRV

ಕೀರ್ತನೆ 139:13–16

13ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?

14ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.

15ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.

16ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.

ಇಡೀ ಅಧ್ಯಾಯ ಓದಿ: ಕೀರ್ತನೆ 139

ಸಂದರ್ಭದಲ್ಲಿ

10ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.

11ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು?

12ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ, ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ.

13ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?

14ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.

15ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.

16ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.

17ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ, ಅವುಗಳು ಎಷ್ಟೋ ಅಸಂಖ್ಯವಾಗಿವೆ.

18ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.

19ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, ಎಷ್ಟೋ ಒಳ್ಳೆಯದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.

ಕೀರ್ತನೆ 139

ಇಂಗ್ಲಿಷ್‌ನಲ್ಲಿ

Berean Standard BiblePsalm 139:13–16For You formed my inmost being; You knit me together in my mother’s womb. I praise You, for I am fearfully and wonderfully made. Marvelous are Your works, and I know this very well. My frame was not hidden from You when I was made in secret, when I was woven together in the depths of the earth. Your eyes saw my unformed body; all my days were written in Your book and ordained for me before one of them came to be.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಆದಿ 1:26–27ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
ಯೆರೆ 1:5“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.
ಕೀರ್ತ 111:2ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.
ಕೀರ್ತ 104:24ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.
ಕೀರ್ತ 119:73ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು.
ಯೆಶಾ 44:2ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!
ಕೀರ್ತ 92:4–5ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ. ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.
ಯೋಬ 31:15ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಗರ್ಭದಲ್ಲಿ ರೂಪಿಸಿದನಲ್ಲವೇ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು