Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೀರ್ತನೆ 147:3

ಬೈಬಲ್ ವಚನ · IRV

ಕೀರ್ತನೆ 147:3

ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.

ಇಡೀ ಅಧ್ಯಾಯ ಓದಿ: ಕೀರ್ತನೆ 147

ಸಂದರ್ಭದಲ್ಲಿ

1ಯೆಹೋವನಿಗೆ ಸ್ತೋತ್ರ! ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದೂ, ಸಂತೋಷಕರವೂ ಆಗಿದೆ, ಆತನನ್ನು ಕೀರ್ತಿಸುವುದು ಯುಕ್ತವಾಗಿದೆ.

2ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ,

3ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.

4ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.

5ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ.

6ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.

ಕೀರ್ತನೆ 147

ಇಂಗ್ಲಿಷ್‌ನಲ್ಲಿ

Berean Standard BiblePsalm 147:3He heals the brokenhearted and binds up their wounds.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೀರ್ತ 34:18ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
ಯೋಬ 5:18ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.
ಯೆರೆ 33:6ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.
ಯೆಶಾ 61:1ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
ಲೂಕ 4:18“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ
ಹೋಶೇ 6:1–2ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು. ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.
ಕೀರ್ತ 51:17ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.
ಯೆಶಾ 57:15ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು