Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೀರ್ತನೆ 150

ಬೈಬಲ್ ವಚನ · IRV

ಕೀರ್ತನೆ 150

1ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.

2ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ.

3ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.

4ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.

5ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.

6ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!

ಇಡೀ ಅಧ್ಯಾಯ ಓದಿ: ಕೀರ್ತನೆ 150

ಇಂಗ್ಲಿಷ್‌ನಲ್ಲಿ

Berean Standard BiblePsalm 150Hallelujah! Praise God in His sanctuary. Praise Him in His mighty heavens. Praise Him for His mighty acts; praise Him for His excellent greatness. Praise Him with the sound of the horn; praise Him with the harp and lyre. Praise Him with tambourine and dancing; praise Him with strings and flute. Praise Him with clashing cymbals; praise Him with resounding cymbals. Let everything that has breath praise the LORD! Hallelujah!

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೀರ್ತ 145:21ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು, ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ.
ಪ್ರಕ 5:13ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು.
ಕೀರ್ತ 103:22ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.
ಕೀರ್ತ 145:10ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
ಕೀರ್ತ 148:7–11ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ. ತಿಮಿಂಗಿಲಗಳು, ಆದಿಸಾಗರಗಳು ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು, ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು, ಎಲ್ಲಾ ತುರಾಯಿ ಮರಗಳು, ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು, ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು,
ಕೀರ್ತ 149:1ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.
ಕೀರ್ತ 134:2ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ.
ಧರ್ಮೋ 3:24ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಬೇರೆ ಯಾವ ದೇವರು ನಡೆಸಲಾರನು?

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು