Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೀರ್ತನೆ 23

ಬೈಬಲ್ ವಚನ · IRV

ಕೀರ್ತನೆ 23

1ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು.

2ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.

3ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.

4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.

5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

6ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.

ಇಡೀ ಅಧ್ಯಾಯ ಓದಿ: ಕೀರ್ತನೆ 23

ಇಂಗ್ಲಿಷ್‌ನಲ್ಲಿ

Berean Standard BiblePsalm 23A Psalm of David. The LORD is my shepherd; I shall not want. He makes me lie down in green pastures; He leads me beside quiet waters. He restores my soul; He guides me in the paths of righteousness for the sake of His name. Even though I walk through the valley of the shadow of death, I will fear no evil, for You are with me; Your rod and Your staff, they comfort me. You prepare a table before me in the presence of my enemies. You anoint my head with oil; my cup overflows. Surely goodness and mercy will follow me all the days of my life, and I will dwell in the house of the LORD forever.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಫಿಲಿಪ್ಪಿ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.
ಯೋಹಾ 10:11“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
ಯೆಶಾ 40:11ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
ಯೋಹಾ 10:27–30ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು. ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.
ಯೋಹಾ 10:14ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.
ಪ್ರಕ 7:17ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.
ಯೆಶಾ 41:10ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ಮತ್ತಾ 6:33ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು