ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೀರ್ತನೆ 34:17–20
ಬೈಬಲ್ ವಚನ · IRV
ಕೀರ್ತನೆ 34:17–20
17ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
18ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
19ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
20ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
ಸಂದರ್ಭದಲ್ಲಿ
14ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
15ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
16ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.
17ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
18ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
19ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
20ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
21ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.
22ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.
ಇಂಗ್ಲಿಷ್‌ನಲ್ಲಿ
The righteous cry out, and the LORD hears; He delivers them from all their troubles. The LORD is near to the brokenhearted; He saves the contrite in spirit. Many are the afflictions of the righteous, but the LORD delivers him from them all. He protects all his bones; not one of them will be broken.ಹೊಸ ಒಡಂಬಡಿಕೆಯಲ್ಲಿ ಉಲ್ಲೇಖಿತ
ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ. ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು