Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೀರ್ತನೆ 37:4

ಬೈಬಲ್ ವಚನ · IRV

ಕೀರ್ತನೆ 37:4

ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.

ಇಡೀ ಅಧ್ಯಾಯ ಓದಿ: ಕೀರ್ತನೆ 37

ಸಂದರ್ಭದಲ್ಲಿ

1ದಾವೀದನ ಕೀರ್ತನೆ. ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.

2ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು.

3ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.

4ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.

5ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.

6ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.

7ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.

ಕೀರ್ತನೆ 37

ಇಂಗ್ಲಿಷ್‌ನಲ್ಲಿ

Berean Standard BiblePsalm 37:4Delight yourself in the LORD, and He will give you the desires of your heart.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಯೋಹಾ 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.
ಕೀರ್ತ 145:19ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.
ಯೋಹಾ 15:16ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.
ಯೆಶಾ 58:14ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.
1 ಯೋಹಾ 5:14–15ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.
ಕೀರ್ತ 21:1–2ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ. ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ
ಯೋಬ 22:26ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ದೇವರ ಅಭಿಮುಖನಾಗಿರುವೆ.
1 ಪೇತ್ರ 1:8–9ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು