Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಪ್ರಕಟಣೆ 12:9

ಬೈಬಲ್ ವಚನ · IRV

ಪ್ರಕಟಣೆ 12:9

ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.

ಇಡೀ ಅಧ್ಯಾಯ ಓದಿ: ಪ್ರಕಟಣೆ 12

ಸಂದರ್ಭದಲ್ಲಿ

6ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು.

7ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.

8ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.

9ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.

10ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.

11ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.

12ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು.

ಪ್ರಕಟಣೆ 12

ಇಂಗ್ಲಿಷ್‌ನಲ್ಲಿ

Berean Standard BibleRevelation 12:9And the great dragon was hurled down—that ancient serpent called the devil and Satan, the deceiver of the whole world. He was hurled to the earth, and his angels with him.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಲೂಕ 10:18ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.
ಯೋಹಾ 12:31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು
ಪ್ರಕ 20:10ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.
1 ಯೋಹಾ 5:19ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.
ಯೆಶಾ 14:12ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!
2 ಕೊರಿ 4:4ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.
ಯೋಬ 2:1–2ದೇವದೂತರು ಇನ್ನೊಂದು ದಿನ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ಸೈತಾನನೂ ಅವರ ಸಂಗಡ ಬಂದು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡನು. ಯೆಹೋವನು, “ಎಲ್ಲಿಂದ ಬಂದೆ?” ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದನು.
ಪ್ರಕ 20:2–3ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು. ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು