ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಪ್ರಕಟಣೆ 21:4
ಬೈಬಲ್ ವಚನ · IRV
ಪ್ರಕಟಣೆ 21:4
ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.
ಸಂದರ್ಭದಲ್ಲಿ
1ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.
2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.
3ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.
4ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.
5ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು.
6ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.
7ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.
ಇಂಗ್ಲಿಷ್ನಲ್ಲಿ
‘He will wipe away every tear from their eyes,’ and there will be no more death or mourning or crying or pain, for the former things have passed away.”ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ.ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು. ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು